ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಬ್ರಹತ್ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ 73 ನ್ ಜನ್ಮ ದಿನದ ಪ್ರಯುಕ್ತ ದೇಶದಾದ್ಯಂತ ನಡೆಯುತ್ತಿರುವ ಸೇವಾ ಪಾಕ್ಷಿಕ ದ ಅಂಗವಾಗಿ ಬ್ರಹತ್ ರಕ್ತದಾನ ಶಿಬಿರ ಬೈಂದೂರಿನ ಅಂಬಿಕಾ ಇಂಟರ್ನ್ಯಾಷನಲ್ ಹೋಟೆಲ್ ನ ಶಾರದಾ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ,ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ,ಯುವ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಅನುರ ಮೆಂಡನ್ ಉಪಸ್ಥಿತರಿದ್ದರು.