ಸಾರ್ವಜನಿಕ ಸಹಭಾಗಿತ್ವದಡಿ ಕ್ಷೇತ್ರದಲ್ಲಿ ಅಭಿವೃದ್ಧಿ

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ದಾನಿಗಳು ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿ ವಾಡುವ ಪ್ರಯತ್ನ ನಡೆಯುತ್ತಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಪ್ರಾವಾಣಿಕ ಪ್ರಯತ್ನ ವಾಡಲಾಗುವುದು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಗುಜ್ಜಾಡಿ ಗ್ರಾಪಂ ವ್ಯಾಪ್ತಿಯಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ಕೊಡಂಚ ರಸ್ತೆ ಮತ್ತು 3 ಲಕ್ಷ ರೂ. ವೆಚ್ಚದಲ್ಲಿ ಪರಮತೋಟ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಿ ವಾತನಾಡಿದರು.

ಪುರೋಹಿತ ಜಿ.ವಿಠಲದಾಸ ಭಟ್ ಗಂಗೊಳ್ಳಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಗುಜ್ಜಾಡಿ ಉದ್ಯಮಿ ಉಮೇಶ ಎಲ್.ಮೇಸ್ತ, ಗ್ರಾಪಂ ಸದಸ್ಯರಾದ ಹರೀಶ ಮೇಸ್ತ, ತುಂಗಾ ಪೂಜಾರಿ, ಶ್ರೀಧರ, ಗುಜ್ಜಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜು ಪೂಜಾರಿ, ಮೋಹನ ನಾಯ್ಕ, ಜಿ.ರೋಹಿದಾಸ ನಾಯಕ್, ಅಶೋಕ ನಾಯ್ಕ, ರಾಮನಾಥ ಚಿತ್ತಾಲ್, ಅಕ್ಷಯ ಮಂಕಿ, ಸುಕ್ರ ಪೂಜಾರಿ, ಸುಧಾಕರ ಪೂಜಾರಿ, ಶ್ರೀಧರ ಪೂಜಾರಿ, ನರಸಿಂಹ ನಾಯ್ಕ, ಬೈಂದೂರು ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಂತ್, ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.