ಗುಜ್ಜಾಡಿ ಲೈಟ್‌ಹೌಸ್ ಪ್ರದೇಶದಲ್ಲಿ ಕಡಲ ಕೊರೆತ ವೀಕ್ಷಣೆ – ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮದ ಲೈಟ್‌ಹೌಸ್ ಪ್ರದೇಶದಲ್ಲಿ ಉಂಟಾಗಿರುವ ಕಡಲ ಕೊರೆತದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಕಡಲ ಕೊರೆತದಿಂದ ಕರಾವಳಿ ಪ್ರದೇಶದಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗೂ ಸ್ಥಳೀಯರ ಆತಂಕದ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ, ತಕ್ಷಣವೇ ಅಗತ್ಯ ಮುಂಜಾಗ್ರತಾ ಹಾಗೂ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.

ಸಾರ್ವಜನಿಕರ ಸುರಕ್ಷತೆ ಹಾಗೂ ಕರಾವಳಿ ಸಂರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು. ಕಡಲ ಕೊರೆತವನ್ನು ತಡೆಗಟ್ಟಲು ಅಗತ್ಯ ಕಾಮಗಾರಿಗಳನ್ನು ವಿಳಂಬವಿಲ್ಲದೆ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.