ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿರುವ ಬಾಲಕ ಮತ್ತು ಬಾಲಕಿಯರ ಶೌಚಾಲಯ ಕಾಮಗಾರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕರು, ಸಮಾಜದ ಒಗ್ಗೂಡುವಿಕೆಯಿಂದ ನಮ್ಮ ಊರಿನ ಸರ್ಕಾರಿ ಶಾಲೆಗಳನ್ನು ಇನ್ನಷ್ಟು ಬಲಪಡಿಸಲು ಸಾಧ್ಯ. ಸಮಾಜದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಸಹಕಾರಿಯಾಗುತ್ತದೆ ಎಂದರು.
ಶಾಲಾ ಮುಖ್ಯಶಿಕ್ಷಕಿ ಗೀತಾ ಮಾತನಾಡಿ, ಶಾಸಕರ 300 ಟ್ರೀಸ್ ಯೋಜನೆಯಿಂದ ಇಂದು ಬೈಂದೂರು ಕ್ಷೇತ್ರದ ಹಲವಾರು ಸರ್ಕಾರಿ ಶಾಲೆಗಳು ಭೌತಿಕ ಸೌಲಭ್ಯಗಳು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ, ಶಿಕ್ಷಣ ಕ್ಷೇತ್ರಕ್ಕೆ ಅವರು ಕಾಳಜಿ ಅಭಿನಂದನಾರ್ಹ ಎಂದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್, ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅರಾಟೆ, ಬೈಂದೂರು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿಗಳಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ, ಗುರುಕಿರಣ್, ಸಂತೋಷ್ ಮೊಗವೀರ, ಶಾಂತಾರಾಮ ಶೆಟ್ಟಿ, ಅರುಣ್ ಆಚಾರ್ಯ, ನಿವೃತ್ತ ಶಿಕ್ಷಕರಾದ ಸದಾಶಿವ ಶೆಟ್ಟಿ, ತೇಜಪ್ಪ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿ ರಾಜೀವ ಶೆಟ್ಟಿ ಕಡ್ಲೇರ ಮನೆ ಇದ್ದರು. ಸಹಶಿಕ್ಷಕಿ ಪ್ರತಿಮಾ ಜಿ. ನಿರೂಪಿಸಿದರು.
