ಬಿಜೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರಕ್ಕೆ ಚಾಲನೆ

ಕುಂದಾಪುರ: “ಸಮೃದ ಬೈಂದೂರು”ಯೋಜನೆಯ ಮೊದಲ ಕಾರ್ಯಕ್ರಮ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ವತಿಯಿಂದ ಬೈಂದೂರು ತಾಲೂಕಿನ ಬಿಜೂರು ಸರ್ಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯ, ಒಳಗೊಂಡ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಶಾಸಕ ಗುರುರಾಜ್ ಗಂಟೆಹೊಳೆ ಉದ್ಘಾಟಿಸಿ, ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಹಾಗೂ ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ನಂತರ ಮಾತನಾಡಿದ ಶಾಸಕರು ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮಾಡಲಾದ ತ್ರೀ ಹಂಡ್ರೆಡ್ ಟ್ರೀಸ್ ಯೋಜನೆ ದಾನಿಗಳು, ಊರವರು, ಎಸ್.ಡಿ.ಎಂ.ಸಿ ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದರು.

ಸರ್ಕಾರಿ ಶಾಲೆ ಮಕ್ಕಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸಿ ಉತ್ತಮ ಗುಣಮಟ್ಟದ‌ ಮಹತ್ವಾಕಾಂಕ್ಷೆಯಿಂದ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ”ವನ್ನು ಸ್ಥಾಪಿಸಲಾಗಿದೆ ಎಂದು ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ, ಜಡ್ಕಲ್ ತಿಳಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.