ಉಡುಪಿ ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಬೈಂದೂರು ತಾಲೂಕಿನ ಕ್ರೀಡಾಪಟುಗಳಿಗೆ ಸರಕಾರಿ ಪ್ರೌಢಶಾಲೆ ಕಿರಿಮಂಜೇಶ್ವರದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಸಮವಸ್ತ್ರವನ್ನು ವಿತರಿಸಿ ಮಾತನಾಡಿ ಬೆಳೆಯುವ ಸಿರಿ ಮೊಳಕೆಯಲ್ಲಿ ಪ್ರಾಥಮಿಕವಾಗಿ ಮಕ್ಕಳಿಗೆ ಶಿಕ್ಷಣ ಜೊತೆಯಲ್ಲಿ ಕ್ರೀಡೆಯನ್ನು ತೊಡಗಿಸಿಕೊಂಡರೆ ಮುಂದೊಂದು ದಿನ ಹೆಮ್ಮರವಾಗಿ ಬೆಳೆಯುವುದು ಸಾಧ್ಯ ಇದಕ್ಕೆ ಸಹಕರಿಸಿದ ಶಿಕ್ಷಕರಿಗೆ ಅಭಿನಂದಿಸಿದರು.
ತಾಲೂಕು ಕ್ರೀಡಾಧಿಕಾರಿಯಾಗಿ ಚಂದ್ರಶೇಖರ್ ಶೆಟ್ಟಿ ಅವರು ಮಾತನಾಡಿ ಕೆನರಾ ಬ್ಯಾಂಕ್ ವತಿಯಿಂದ ಮಕ್ಕಳಿಗೆ ಸಮಸ್ತ್ರವನ್ನು ನೀಡಲಾಗಿದೆ ಉಡುಪಿ ಜಿಲ್ಲಾ ಮಟ್ಟ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಭಾಧ್ಯಕ್ಷತೆಯನ್ನು ಶ್ರೀ ಶೇಖರ್ ಖಾರ್ವಿ ಅಧ್ಯಕ್ಷರು ಗ್ರಾಮ ಪಂಚಾಯತ್ ಕಿರಿಮಂಜೇಶ್ವರ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ್, ಕೆನರಾ ಬ್ಯಾಂಕಿನ ಉಡುಪಿ ಡಿವಿಜನಲ್ ಮ್ಯಾನೇಜರ್ ಶ್ರೀ ವಿಭಾಶ್ ಕುಮಾರ್, ಎಸ್ಡಿಎಂಸಿ ಅಧ್ಯಕ್ಷರಾದ ಈಶ್ವರ್, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಬಿಲ್ಲವ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸತೀಶ್, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಶ್ರೀ ರವಿಶಂಕರ್ ಹೆಗಡೆ, ಉಡುಪಿ ಜಿಲ್ಲಾ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಜಿ. ಉಪಸ್ಥಿತರಿದ್ದರು.
ಸಚಿನ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು ಮುಖ್ಯೋಪಾಧ್ಯಾಯರಾದ ಮಂಜುನಾಥ್ ಬಿಲ್ಲವ ವಂದಿಸಿದರು.