ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನಕ್ಕೆ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾ.ಪಂ ನಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಚಾಲನೆ ನೀಡಿದರು.
ನರೇಗಾ ಕರಪತ್ರ ಹಾಗೂ QR code ಬಿಡುಗಡೆ
ಕಾರ್ಯಕ್ರಮದಲ್ಲಿ ಬೈಂದೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಹಾಗೂ ಶಾಸಕರು ನರೇಗಾ ಮಾಹಿತಿಯುಳ್ಳ ಕರಪತ್ರ ಹಾಗೂ MGNREGA YouTube channel QR code ಬಿಡುಗಡೆಗೊಳಿಸಿ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಸದುಪಯೋಗ ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು.
ಗ್ರಾಮದ ಮನೆಗೆ ಖುದ್ದು ಭೇಟಿ, ಕರಪತ್ರ ವಿತರಿಸಿದ ಶಾಸಕರು
ಕಾರ್ಯಕ್ರಮದ ನಂತರ ಶಾಸಕರು ಗ್ರಾಮಸ್ಥೆಯ ಮನೆಗೆ ಭೇಟಿ ನೀಡಿ ಕರಪತ್ರ ವಿತರಿಸುವ ಜೊತೆಗೆ ಕಾಮಗಾರಿಗೆ ಬೇಡಿಕೆ ಪಡೆದು ಮಾದರಿ ಎನಿಸಿದರು. ಇದೇ ಸಂದರ್ಭ ಮಾತನಾಡಿದ ಅವರು ಉದ್ಯೋಗ ಖಾತರಿ ಯೋಜನೆ ಮಹತ್ವಾಕಾಂಕ್ಷಿ ಯೋಜನೆ ಇದರ ಉಪಯೋಗವನ್ನು ಗ್ರಾಮೀಣ ಜನರು ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಬೈಂದೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ, ಸಹಾಯಕ ನಿರ್ದೇಶಕರಾದ ಸುರೇಶ್, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಾಧವ ದೇವಾಡಿಗ,ನರೇಗಾ ತಾಂತ್ರಿಕ ಸಂಯೋಜಕರಾದ ಲೋಕೇಶ್,ಐ.ಇ.ಸಿ ಸಂಯೋಜಕರು, ಪಂಚಾಯತ್ ಸಿಬ್ಬಂದಿಯವರು, ನರೇಗಾ ಕೂಲಿಕಾರರು, ಗ್ರಾಮಸ್ಥರ ಭಾಗಿಯಾಗಿದ್ದರು.