ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆಯ ವಿತರಣೆ ಕಾರ್ಯಕ್ರಮ

ಸಮೃದ್ಧ ಬೈಂದೂರು ಇದರ ವತಿಯಿಂದ ಇಂದು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ ಶಾಲೆಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆಯ ವಿತರಣೆ ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆ ನಡೆಯಿತು.

ಈ ಕಾರ್ಯಕ್ರಮವನ್ನು ಸಮೃದ್ಧ ಬೈಂದೂರು ಸಂಚಾಲಕರಾದ ಶ್ರೀ ಬಿ ಎಸ್ ಸುರೇಶ್ ಶೆಟ್ಟಿ ಉದ್ಘಾಟಿಸಿದರು ಅದೇ ರೀತಿ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಶ್ರೀ ಸುರೇಂದ್ರ ವಾಗ್ಲೆ ಹಾಗೂ ಬೈಂದೂರ್ ರೋಟರಿ ಅಧ್ಯಕ್ಷರಾದ ಪ್ರಸಾದ್ ಪ್ರಭು ಜಿಪಿಯುಸಿ ಬೈಂದೂರು ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್ ಪಿ ನಾಯ್ಕ ಭಾಗವಹಿಸಿದ್ದರು.

ವಿಜಯವಾಣಿಯ ಶ್ರೀಪತಿ ಹೆಗಡೆ ಹಕ್ಲಾಡಿ ಇವರು ಪ್ರಸ್ತಾವಿಕ ನುಡಿಗಳನ್ನಾಡಿದರು.