ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಸಂಸದರು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು. ಸಂಸದ ಬಿ.ವೈ ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ಕೃಷ್ಣ ರೆಡ್ಡಿ ಗಂಗಾಪುರಂ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿರುವ ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ ಸಲ್ಲಿಸಿದರು.
ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ, ಕೊಡಚಾದ್ರಿ, ಸೋಮೇಶ್ವರ ಬೀಚ್, ತ್ರಾಸಿ-ಮರವಂತೆಗಳಂತಹ ಸಾಕಷ್ಟು ಪ್ರವಾಸೋದ್ಯಮ ಸ್ಥಳಗಳಿಂದ ಶ್ರೀಮಂತವಾಗಿರುವ ಕ್ಷೇತ್ರ, ಬೈಂದೂರು. ಇಲ್ಲಿ ಪ್ರವಾಸೋದ್ಯಮವನ್ನು ಬೆಳೆಸಬೇಕಿದ್ದರೆ, ಮೊದಲು ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದು ಮುಖ್ಯ. ಇದಕ್ಕಾಗಿ “ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಏಜೆನ್ಸಿಗಳಿಗೆ ನೆರವು” ಅಡಿಯಲ್ಲಿ ರೂ 14.00 ಕೋಟಿ ಅನುದಾನ ಮಂಜೂರು ಮಾಡುವಂತೆ ಅವರು ಕೇಳಿಕೊಂಡಾಗ ಸಚಿವರು ಉತ್ಸಾಹದಿಂದ ಸ್ಪಂದಿಸಿ, ಶೀಘ್ರವೇ ಯೋಜನೆಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದರು ಹೇಳಿದ್ದಾರೆ.
Byndoor assembly constituency, which is a part of the Shivamogga parliament constituency that I represent, has abundant natural diversity and innumerable tourist destinations. Kolluru Mookambika temple, Mookambika Wildlife Sanctuary, Kodachadri Hills, and… pic.twitter.com/HNxQVz1rFS
— B Y Raghavendra (@BYRBJP) December 21, 2023