News & Events
ಮೀನುಗಾರಿಕಾ ಇಲಾಖೆಯ ಅಧಿಕಾರಿಯೊಂದಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಸಭೆ
ಮೀನುಗಾರಿಕಾ ಇಲಾಖೆಯ ಅಧಿಕಾರಿಯೊಂದಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಸಭೆ ನಡೆಸಿದರು. ಮೀನುಗಾರರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು, ಹಾಗೆಯೇ ಅವರಿಗೆ ಅನುಕೂಲವಾಗುವ ಹೊಸ ಯೋಜನೆಗಳ ಕುರಿತು ಚರ್ಚಿಸಿ, ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಮೀನುಗಾರಿಕಾ ಇಲಾಖೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿ ತಿಳಿಸಿದರು.
ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಶಾಸಕರಾದ ಗುರುರಾಜ್ ಗಂಟಿಹೊಳೆ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಶಾಸಕರು.
ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಗುರುರಾಜ್ ಗಂಟಿಹೊಳೆ
ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವೈದ್ಯಾಧಿಕಾರಿಯವರ ನಿರ್ಲಕ್ಷ್ಯದ ಬಗ್ಗೆ ಗರಂ ಆದರು. ಇಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಎಲ್ಲ ಸೌಲಭ್ಯಗಳನ್ನು ಹೊಂದಿದ್ದರು ಸಹ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ತರಾಟೆಗೆ ತೆಗೆದುಕೊಂಡರು. ಕರ್ತವ್ಯ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಮತ್ತೆ ಇದೇ ರೀತಿಯಾದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
