News & Events
ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆ: ಶಾಸಕ ಗಂಟಿಹೊಳೆ
ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆಯಾಗಬೇಕು. ಗ್ರಾಮೀಣ ಭಾಗದಲ್ಲಿ ಹುಟ್ಟಿಬೆಳೆದು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಸಾಧಕರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದ್ದಾರೆ. ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಗೋಪಾಲಕೃಷ್ಣ ಅಡಿಗ ಸ್ಮಾರಕ ಟ್ರಸ್ಟ್ ಬೆಂಗಳೂರು ಇವರ ಸಹಯೋಗದಲ್ಲಿ ಕವಿ ಗೋಪಾಲಕೃಷ್ಣ ಅಡಿಗರ 108ನೇ ಜನ್ಮ ದಿನೋತ್ಸವದ ಪ್ರಯುಕ್ತ ಅಯೋಜಿಸಿದ್ದ ಅಡಿಗ ಸಂಸ್ಮರಣೆ ಮತ್ತು ಕಾರಂತರ ಕುರಿತು
ಹರ್ಕೂರಿನ ಕೊರಗ ಸಮುದಾಯದ ಮನೆಯಲ್ಲಿ ಶಾಸಕರ ಗ್ರಾಮ ವಾಸ್ತವ್ಯ
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹರ್ಕೂರು ಗ್ರಾಮದ ಹಿಂದುಳಿದ ಕೊರಗ ಸಮುದಾಯದ ಮನೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ಅವರೊಂದಿಗೆ ಭೋಜನ ಸವಿದು, ಸಮಸ್ಯೆಗಳನ್ನು ಆಲಿಸಿದ್ದಾರೆ. ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ಕೂರು ಗ್ರಾಮದ ಮದುಕೊಡ್ಡು ಎಂಬಲ್ಲಿನ ಕೊರಗ ಸಮುದಾಯದ ಸುರೇಂದ್ರ ಎಂಬುವವರ ಮನೆಯಲ್ಲಿ ಮಂಗಳವಾರ ರಾತ್ರಿ ಶಾಸಕರು ವಾಸ್ತವ್ಯ ಹೂಡಿದ್ದರು. ಮನೆಯವರ ಜೊತೆ ಕುಳಿತು ಆತ್ಮೀಯವಾಗಿ ಭೋಜನ ಸವಿದ ಅವರು, ಸಾಮಾನ್ಯರಲ್ಲಿ ಸಾಮಾನ್ಯರಂತೆ ರಾತ್ರಿ ವಿಶ್ರಾಂತಿ ಪಡೆದರು. ಈ ಸಂದರ್ಭದಲ್ಲಿ ಮಹಿಳೆಯರಿಗೆ ಬಾಗಿನ ನೀಡಿ ಗೌರವ
ಫಲಿತಾಂಶಕ್ಕಾಗಿ ಶಿಕ್ಷಣ ಮೌಲ್ಯ ಕಡಿಮೆಯಾಗದಿರಲಿ
ಬೈಂದೂರು ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ವಾತನಾಡಿದರು. ಡಿಡಿಪಿಐ ಲೋಕೇಶ್, ಬೈಂದೂರು ಬಿಇಒ ನಾಗೇಶ ಕೆ. ನಾಯ್ಕ, ಕುಂದಾಪುರ ಬಿಇಒ ಶೋಭಾ ಶೆಟ್ಟಿ ಮತ್ತಿತರರಿದ್ದರು. ಬೈಂದೂರು: ಈಗಾಗಲೇ ಬೈಂದೂರು ವ್ಯಾಪ್ತಿಯ ಕೆಲವು ಶಾಲೆಗಳು ಕಳೆದ ಸಾಲಿನ ಫಲಿತಾಂಶದಲ್ಲಿ ಹಿನ್ನಡೆ ಕಂಡಿದ್ದು, ಅಂತಹ ಶಾಲೆಗಳು ಈ ಸಾಲಿನಲ್ಲಿ ಸುಧಾರಿತ ಕ್ರಮಗಳ ಬಗ್ಗೆ ಚಿಂತನೆ ನಡೆಸಿದ್ದಾರೆ. ಕಳೆದ ಸಾಲಿನಲ್ಲಿ ಕಡಿಮೆ ಶೈಕ್ಷಣಿಕ ಸಾಧನೆ ತೋರಿದ ಶಾಲೆಗಳಲ್ಲಿ ಹೆಚ್ಚಿನ ಫಲಿತಾಂಶ
ಯಕ್ಷಗಾನ ಕಲಾರಂಗವೆಂಬುದು ವಿಸ್ಮಯ: ಶಾಸಕ ಗಂಟಿಹೊಳೆ
ಯಕ್ಷಗಾನ ಕಲಾರಂಗದ 88ನೆಯ ಮನೆ ಹಸ್ತಾಂತರ ಯಕ್ಷಗಾನ ಕಲಾರಂಗ ಉಡುಪಿ ಇದರ ವಿದ್ಯಾಪೋಷಕ್‌ನಡಿ 88ನೆಯ ಮನೆಯನ್ನು ಶನಿವಾರ ಹಸ್ತಾಂತರಿಸಲಾಯಿತು. ಎಂಎಸ್‌ಆರ್‌ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕಿ ಡಾ.ಶಾರದಾಎಂ. ಇವರು ತಮ್ಮ ಪತಿ ಕೃಷ್ಣಮೂರ್ತಿ ಕೆ.ಇವರ ಸ್ಮರಣೆಯಲ್ಲಿ, 7,00,000 ರೂ.ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಛಂದೋಗತಿ’ಯನ್ನು ಬೈಂದೂರು ತಾಲೂಕಿನ ಜಡ್ಕಲ್ ಸೆಲ್ಕೋಡ್ ನಿವಾಸಿಗಳಾದ ಚಿಕ್ಕಮ್ಮ ಮತ್ತು ಶಂಕರ ನಾಯ್ಕ್ ಇವರ ಪುತ್ರ ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಎಸ್. ನಾಯ್ಕ್‌ಗೆ ನಿರ್ಮಿಸಿಕೊಡಲಾಗಿದೆ. ಇದು ಶಾರದಾ ಎಂ ಅವರ ಪ್ರಾಯೋಜಕತ್ವದ ಎರಡನೇ
ಸಾರ್ವಜನಿಕ ಸಹಭಾಗಿತ್ವದಡಿ ಕ್ಷೇತ್ರದಲ್ಲಿ ಅಭಿವೃದ್ಧಿ
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ದಾನಿಗಳು ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿ ವಾಡುವ ಪ್ರಯತ್ನ ನಡೆಯುತ್ತಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಪ್ರಾವಾಣಿಕ ಪ್ರಯತ್ನ ವಾಡಲಾಗುವುದು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಗುಜ್ಜಾಡಿ ಗ್ರಾಪಂ ವ್ಯಾಪ್ತಿಯಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ಕೊಡಂಚ ರಸ್ತೆ ಮತ್ತು 3 ಲಕ್ಷ ರೂ. ವೆಚ್ಚದಲ್ಲಿ ಪರಮತೋಟ ರಸ್ತೆ
ಇ.ಎಸ್.ಐ ಆರೋಗ್ಯ ವಿಮಾ ಯೋಜನೆಯಡಿ ಜಿಲ್ಲೆಯ ನೋಂದಾಯಿತ ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕರು
ಉಡುಪಿ ಜಿಲ್ಲೆಯಲ್ಲಿ ಕೆ.ಎಂ.ಸಿ ಮಣಿಪಾಲ ಆಸ್ಪತ್ರೆಯನ್ನು ಯೋಜನೆಯಡಿಯಲ್ಲಿ ಮುಂದುವರಿಸಲು ಆಗ್ರಹ. ಇ-ಪೋರ್ಟಲ್ ನಲ್ಲಿ ತಿರಸ್ಕೃತಗೊಂಡ ಎಲ್ಲಾ ಆಸ್ಪತ್ರೆಗಳನ್ನು ಮತ್ತೊಮ್ಮೆ ಪರಿಗಣಿಸುವ ಪ್ರಸ್ತಾವನೆ ಸರಕಾರದ ಹಂತದಲ್ಲಿದೆ ಎಂದ ಕಾರ್ಮಿಕ ಸಚಿವರು. ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ರಾಜ್ಯದಲ್ಲಿ ಇತ್ತೀಚಿಗೆ ಇ.ಎಸ್.ಐ ಎಂಪನೆಲ್ಡ್ ಆಸ್ಪತ್ರೆಗಳ ಸಂಖ್ಯೆಯನ್ನು ಕಡಿತ ಗೊಳಿಸಿರುವುದು ಮುಖ್ಯವಾಗಿ ಉಡುಪಿ ಜಿಲ್ಲೆಯಲ್ಲಿರುವ ಕಸ್ತೂರ್ಬಾ ಆಸ್ಪತ್ರೆಯನ್ನು ಇ.ಎಸ್.ಐ ಆರೋಗ್ಯ ಸೇವೆ ನೀಡುವ ಎಂಪನೆಲ್ಡ್
‘ದುಡ್ಮಿ’ ಯೋಜನೆ ಲೋಕಾರ್ಪಣೆ
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೈಂದೂರು ಉತ್ಸವದಲ್ಲಿ ಭಾನುವಾರ ರಾತ್ರಿ ಭಾಗವಹಿಸಿ ಶಾಸಕ ಗಂಟಿಹೊಳೆ ಅವರ ನೂತನ ‘ದುಡ್ಮಿ’ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ. ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಬಗ್ಗೆ ವಾತ್ರ ಗಮನ ಹರಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ವಾಡಿಲ್ಲ, ವಾಡುವುದೂ ಇಲ್ಲ. ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ. ನಿಸ್ವಾರ್ಥತೆಯಿಂದ ಎಲ್ಲರೂ ಉತ್ತಮ ಕೆಲಸ ವಾಡಬೇಕು. ಮಹಾತ್ಮ ಗಾಂಧಿಯವರ ಅವರ ಪರಿಕಲ್ಪನೆಯಂತೆ ಶಾಸಕ ಗಂಟಿಹೊಳೆ ಅವರು
ಇಲಾಖೆಗಳ ಯೋಜನೆ, ಸೌಲಭ್ಯ ಜನರಿಗೆ ನೇರವಾಗಿ ತಲುಪಿಸಬೇಕು – ಗ್ರಾಮೋತ್ಸವದಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಅಭಿಮತ
ಬೇರೆ ಬೇರೆ ಇಲಾಖೆಗಳ ಯೋಜನೆ, ಸೌಲಭ್ಯ ಜನರಿಗೆ ನೇರವಾಗಿ ತಲುಪಿಸಬೇಕು ಎನ್ನುವ ಉದ್ದೇಶದಿಂದ ಗ್ರಾಪಂ, ಸಂಜೀವಿನಿ ಸಂಘಗಳ ಮೂಲಕ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ಮಟ್ಟದಲ್ಲಿ ಗ್ರಾಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಹೊಸಾಡು ಗ್ರಾಪಂ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಗಂಗೊಳ್ಳಿ ಆರಕ್ಷಕ ಠಾಣೆ, ಪಶು ಸಂಪಗೋನಾ ಮತ್ತು ತೋಟಗಾರಿಕಾ, ಮೆಸ್ಕಾಂ, ಶಿಕ್ಷಣ ಇಲಾಖೆ, ಆಯುಷ್
ಜಡ್ಕಲ್ -ಮುದೂರು ಗ್ರಾಮಗಳ ಪ್ಲಾಟಿಂಗ್ ಸಮಸ್ಯೆ ಸಹಿತ ಹಲವು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದ ಶಾಸಕರು
ಜಡ್ಕಲ್ ಹಾಗೂ ಮುದೂರು ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ನೂರಾರು ಕುಟುಂಬಗಳು ಭೂ ಸಂಬಂಧಿ ಪ್ಲಾಟಿಂಗ್ ಸಮಸ್ಯೆ ಯಿಂದಾಗಿ ತಮ್ಮ ಜಮೀನಿನ ಮಾಲಿಕತ್ವದ ದಾಖಲೆಗಳನ್ನು ಪಡೆಯಲು ಆಗದೇ ಇರುವ ಸಮಸ್ಯೆಯ ವಿಚಾರವಾಗಿ ಆ ಭಾಗದ ಪ್ರಮುಖರ ನಿಯೋಗದೊಂದಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಉಡುಪಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ವಿಷಯ ಪ್ರಸ್ತಾಪಿಸಿದರು. ಪ್ರಸ್ತುತ ಸಾಕಷ್ಟು ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲು ಮನವಿ ಮಾಡಿದ್ದಾರೆ. ಶಾಸಕರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು
ಜನವರಿಯಲ್ಲಿ ಅದ್ದೂರಿ ಬೈಂದೂರು ಉತ್ಸವ – ಶಾಸಕರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಬೈಂದೂರು: ಜಿಲ್ಲೆಯ ತುತ್ತತುದಿಯಲ್ಲಿ ಅತ್ಯಂತ ವಿಶಾಲ ವ್ಯಾಪ್ತಿ ಹೊಂದಿರುವ ಬೈಂದೂರು ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆ ಮೂಲಕ ಅಭಿವೃದ್ಧಿ ಪರಿಕಲ್ಪನೆಯ ಉದ್ದೇಶದಿಂದ ಮತ್ತು ಜಾಗತಿಕ ಮಟ್ಟದಲ್ಲಿ ಬೈಂದೂರು ಕ್ಚೇತ್ರದವರನ್ನು ಒಗ್ಗೂಡಿಸುವ ಚಿಂತನೆಯಲ್ಲಿ ಸಮೃದ್ಧ ಬೈಂದೂರು, ವಿವಿಧ ಸಂಘ ಸಂಸ್ಥೆ ಹಾಗೂ ತಾಲೂಕು ಆಡಳಿತ ಬೈಂದೂರು ಇದರ ಸಹಭಾಗಿತ್ವದಲ್ಲಿ ಎರಡನೇ ವರ್ಷದ ಸಾಂಸ್ಕ್ರತಿಕ ಸಂಭ್ರಮದ ಬೈಂದೂರು ಉತ್ಸವ ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಉಪ್ಪುಂದ ಕಾರ್ಯಕರ್ತ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ
