News & Events
ಸ್ಕೂಬಾ ಡೈವಿಂಗ್ ಮೂಲಕ ಎಕ್ಸ್‌ಪ್ಲೋರ್ ಬೈಂದೂರು ಕಾರ್ಯಕ್ರಮಕ್ಕೆ ಶಾಸಕ ಗಂಟಿಹೊಳೆ ಚಾಲನೆ
ಬೈಂದೂರು: ಬೈಂದೂರಿನ ಪ್ರವಾಸೋದ್ಯಮ ಕ್ಷೇತ್ರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಎಕ್ಸ್‌ಪ್ಲೋರ್ ಬೈಂದೂರು ಎನ್ನುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿದ್ದು ಇಂದು ಈ ಕಾರ್ಯಕ್ರಮಕ್ಕೆ ವಿಭಿನ್ನ ರೀತಿಯಲ್ಲಿ ಚಾಲನೆ ನೀಡಿದರು. ಬೈಂದೂರಿನ ಸೋಮೇಶ್ವರ ತೀರದ ನೇರಕ್ಕೆ ಸಮುದ್ರ ಮಧ್ಯದ ನಾಯ್ಕನ ಕಲ್ಲು ಪ್ರದೇಶದ ಬಳಿ ಸಮುದ್ರದಾಳದಲ್ಲಿ ಸ್ಕೂಬಾ ಡೈವಿಂಗ್ ಮೂಲಕ ನೀರಿನಲ್ಲಿ ತೇಲಾಡುತ್ತಾ ಎಕ್ಸ್‌ಪ್ಲೋರ್ ಬೈಂದೂರು ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮೃದ್ಧ ಬೈಂದೂರು ಎಂಬ ಪರಿಕಲ್ಪನೆಯಡಿಯಲ್ಲಿ ಈ ಕಾರ್ಯಕ್ರಮ ಮೂಡಿ
ಪಂಚಗಂಗಾ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸಲು ಸಂಸದರಿಗೆ ಗಂಟಿಹೊಳೆ ಮನವಿ
ಬೈಂದೂರಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ಗಂಟಿಹೊಳೆ ಅವರು ಇದೀಗ ಬೈಂದೂರು-ಬೆಂಗಳೂರಿನ ನಡುವೆ ದಿನನಿತ್ಯ ಓಡಾಡುವ ಜನರ ಬಗ್ಗೆ ಕಾಳಜಿ ವಹಿಸಿ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಸಂಸದರಿಗೆ ನೀಡಲಾದ ಪತ್ರದ ಒಕ್ಕಣೆಯಲ್ಲಿ “ಪಂಚಗಂಗಾ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಮುತುವರ್ಜಿಯಿಂದ ಬೈಂದೂರು ರೈಲು ನಿಲ್ದಾಣದಲ್ಲಿ ಸಾಕಷ್ಟು ರೈಲುಗಳು ನಿಲುಗಡೆಯಾಗುತ್ತಿದೆ. ಬೈಂದೂರು ಭಾಗದ ಸಾವಿರಾರು ಜನರು ವ್ಯಾಪಾರ, ವಿದ್ಯಾಭ್ಯಾಸ ಹಾಗೂ ಉದ್ಯೋಗ ನಿಮಿತ್ತ ರಾಜಧಾನಿ ಬೆಂಗಳೂರನ್ನು
ಶಾಸಕ ಗುರುರಾಜ ಗಂಟಿಹೊಳೆ ಅವರ #WelcomeSehwag ಅಭಿಯಾನಕ್ಕೆ ಕೈಗೂಡಿಸಿದ ಶಾಲಾ ಮಕ್ಕಳು
ಬೆಂಗಳೂರು : ಜಾಗತಿಕವಾಗಿ ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿಯವರ ಲಕ್ಷ ದ್ವೀಪ ಭೇಟಿಯು ಬೈಂದೂರು ಕ್ಷೇತ್ರದಲ್ಲಿ ಮಾರ್ದನಿಸಿದೆ. ಲಕ್ಷದ್ವೀಪದ ಪ್ರವಾಸದ ಬಳಿಕ ಪ್ರಧಾನಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತನ್ನ ಫೋಟೋದೊಂದಿಗೆ ಲಕ್ಷದ್ವೀಪದ ಪ್ರಾಕೃತಿಕ ಸೌಂದರ್ಯವನ್ನು ಹೊಗಳಿದ್ದರು. ಪ್ರಧಾನಿ ಒಂದು ಸಣ್ಣ ನಡೆಯು ಮಾಲ್ಡೀವ್ಸ್ ದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಮೂಲಕ ಅಲ್ಲಿನ ಬೀಚ್ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಿತ್ತು. ಇದರ ಬೆನ್ನಲ್ಲೇ ದೇಶಿಯ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಯಾಯಿತು. ಇದಕ್ಕೆ ದೇಶದ ಖ್ಯಾತನಾಮರು
ಆಲಂದೂರಿನಲ್ಲಿ ಅಯೋಧ್ಯೆ ಮಂತ್ರಾಕ್ಷತೆಯ ವಿತರಣಾ ಅಭಿಯಾನಕ್ಕೆ ಗುರುರಾಜ್ ಗಂಟಿಹೊಳೆ ಚಾಲನೆ
ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿದೆ. ಅಯೋಧ್ಯೆ ಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಿಂದ ಪ್ರಸಾದ ರೂಪದಲ್ಲಿ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಜನವರಿ 1 ರಿಂದ 15ರವರೆಗೆ ದೇಶದ ಗ್ರಾಮ ಗ್ರಾಮಗಳಿಗೂ ತಲುಪಿಸುವ ಸಂಕಲ್ಪ ಹೊಂದಲಾಗಿದೆ. ಈ ಸಂಕಲ್ಪದಂತೆ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಇಂದು ದಿನಾಂಕ 02.01.2024 ರಂದು ಶಿರೂರಿನ ಆಲಂದೂರಿನಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿ, ಆಲಂದೂರು ಭಾಗದ ಮನೆ ಮನೆಗಳಿಗೆ ತೆರಳಿ
ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಸಂಸದರು ಕೇಂದ್ರ ಸಚಿವರಿಗೆ ಮನವಿ
ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಸಂಸದರು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು. ಸಂಸದ ಬಿ.ವೈ ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ಕೃಷ್ಣ ರೆಡ್ಡಿ ಗಂಗಾಪುರಂ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿರುವ ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ ಸಲ್ಲಿಸಿದರು. ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ, ಕೊಡಚಾದ್ರಿ, ಸೋಮೇಶ್ವರ ಬೀಚ್, ತ್ರಾಸಿ-ಮರವಂತೆಗಳಂತಹ ಸಾಕಷ್ಟು ಪ್ರವಾಸೋದ್ಯಮ ಸ್ಥಳಗಳಿಂದ ಶ್ರೀಮಂತವಾಗಿರುವ ಕ್ಷೇತ್ರ, ಬೈಂದೂರು. ಇಲ್ಲಿ
ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆಯ ವಿತರಣೆ ಕಾರ್ಯಕ್ರಮ
ಸಮೃದ್ಧ ಬೈಂದೂರು ಇದರ ವತಿಯಿಂದ ಇಂದು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ ಶಾಲೆಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಪತ್ರಿಕೆಯ ವಿತರಣೆ ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆ ನಡೆಯಿತು. ಈ ಕಾರ್ಯಕ್ರಮವನ್ನು ಸಮೃದ್ಧ ಬೈಂದೂರು ಸಂಚಾಲಕರಾದ ಶ್ರೀ ಬಿ ಎಸ್ ಸುರೇಶ್ ಶೆಟ್ಟಿ ಉದ್ಘಾಟಿಸಿದರು ಅದೇ ರೀತಿ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಶ್ರೀ ಸುರೇಂದ್ರ ವಾಗ್ಲೆ ಹಾಗೂ ಬೈಂದೂರ್ ರೋಟರಿ ಅಧ್ಯಕ್ಷರಾದ ಪ್ರಸಾದ್ ಪ್ರಭು ಜಿಪಿಯುಸಿ ಬೈಂದೂರು ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್ ಪಿ ನಾಯ್ಕ
ಬೀಚ್, ಫಾಲ್ಸ್, ಟೆಂಪಲ್ : ಸಿದ್ಧವಾಗುತ್ತಿದೆ ಬೈಂದೂರು ಟೂರ್ ಪ್ಯಾಕೇಜ್
ಉಡುಪಿ ಜಿಲ್ಲೆಯ ನೂತನ ಶಾಸಕರಲ್ಲಿ ಓರ್ವರಾದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ತನ್ನ ಕ್ಷೇತ್ರದ ಪ್ರಮುಖ ಹದಿನೈದು ಸ್ಥಳಗಳಿಗೆ ಟೂರ್ ಪ್ಯಾಕೇಜ್ ಒಂದನ್ನು ಆರಂಭಿಸುವ ಉತ್ಸಾಹದಲ್ಲಿದ್ದಾರೆ. ತಿಂಗಳ ಮೊದಲ ವಾರ ಬೈಂದೂರು ತಾಲೂಕಿನ ಧಾರ್ಮಿಕ ಮತ್ತು ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ವಿಶಿಷ್ಟ ಯೋಜನೆ ಇದು. ಕೊಲ್ಲೂರಿಂದ ಆರಂಭವಾಗುವ ಧಾರ್ಮಿಕ ಕ್ಷೇತ್ರ ದರ್ಶನದಲ್ಲಿ ಹಲವು ದೇವಸ್ಥಾನಗಳಿಗೆ ಕರೆದೊಯ್ಯುವ ವ್ಯವಸ್ಥೆಯೂ ಇದೆ. ಒಂದೇ ದಿನದಲ್ಲಿ ಪ್ರವಾಸಿ ತಾಣ ಪರಿಚಯಿಸುವ ಈ ಯೋಜನೆ ಕುರಿತು ರಾಜ್ಯ ರಸ್ತೆ
ಸೇನಾಪುರದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ
ಕುಂದಾಪುರ: ದಿನದಿಂದ ದಿನಕ್ಕೆ ರೈಲು ಪ್ರಯಾಣ ಎನ್ನುವುದು ಜನರಿಗೆ ಬಹಳಷ್ಟು ಅಗತ್ಯವಾಗಿರುವ ಮೂಲಸೌಕರ್ಯಗಳಲ್ಲಿ ಒಂದಾಗಿದೆ. ಕರಾವಳಿ ಭಾಗದ ಜನರ ಜೀವನದ ಕೊಂಡಿ ಆಗಿರುವ ಕೊಂಕಣ ರೈಲು ಸೇವೆ ಎನ್ನುವುದು ಸ್ಥಳೀಯ ಜನರಿಗೆ ಮರಿಚಿಕೆ ಆಗಿದ್ದು ಸೇನಾಪುರ ರೈಲು ನಿಲ್ದಾಣದಲ್ಲಿ ಮುಂಬಯಿ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಲುಗಡೆ ಮಾಡಲು ಸಂಸದರ ಜತೆ ಸೇರಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಕೊಂಕಣ ರೈಲ್ವೆ ಹೋರಾಟ ಸಮಿತಿ ಸೇನಾಪುರ ವತಿಯಿಂದ
ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು : ಶಾಸಕ ಗುರುರಾಜ ಗಂಟಿಹೊಳೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಗೋವಾ ಘಟಕ ಉದ್ಘಾಟನೆ ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ 39 ನೇ ಗೋವಾ ಘಟಕವನ್ನು ಪಣಜಿ ಇನ್ಸಿಟ್ಯೂಟ್ ಮೆನೆಜಸ್ ಬ್ರಗಾನ್ಸಾ ಸಭಾಗೃಹದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಯುವ ಸಮುದಾಯ ಯಕ್ಷಗಾನದ
ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಬೈಂದೂರು ಕ್ಷೇತ್ರದ ಸಾಧಕರಿಗೆ ಅಭಿನಂದನೆಗಳು
ಬೈಂದೂರು ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಾಧಕರು ನಾಗೇಂದ್ರ ರಾವ್ ಉಪ್ಪುಂದ ಯಕ್ಷಗಾನ ಮೊಬೈಲ್ ಸಂಖ್ಯೆ :-7899457645 ಗೋಪಾಲ್ ಗಾಣಿಗ ಆಜ್ರಿ ಯಕ್ಷಗಾನ ಮೊಬೈಲ್ ಸಂಖ್ಯೆ :-9481325672 ಬಿ ಕೃಷ್ಣ ದೇವಾಡಿಗ ಉಪ್ಪುಂದ ಚಿತ್ರಕಲೆ ಮೊಬೈಲ್ ಸಂಖ್ಯೆ :-9980497698 ಪ್ರಥ್ವಿರಾಜ್ ಶೆಟ್ಟಿ ಗೋಳಿಹೊಳೆ ಹುಂಚನಿ ಕ್ರೀಡೆ ದಿವ್ಯಾಂಗರು ಮೊಬೈಲ್ ಸಂಖ್ಯೆ ;-8971560235 ಬಾಬು ಆಚಾರ್ಯ ಹೇರೂರು ಕೃಷಿ ಮೊಬೈಲ್ ಸಂಖ್ಯೆ :-9980270485 ಸಿದ್ದಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಆರ್ಗೋಡು ಮೋಹನದಾಸ್