News & Events
ಡಿಗ್ರಿ ಕಾಲೇಜು ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿದ್ಯಾರ್ಥಿಗಳಿಂದ ಶ್ಲಾಘನೆ
ಕುಂದಾಪುರ: ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಳೆದ 40 ವರ್ಷಗಳ ಇತಿಹಾಸ ಹೊಂದಿದೆ. ಪ್ರಸ್ತುತ 400 ವಿದ್ಯಾರ್ಥಿಗಳಿದ್ದಾರೆ. ಆದರೆ ಇದುವರೆಗೆ ಈ ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳಿಗೆ ಬಸ್ಸಿನ ಸೌಲಭ್ಯ ಇರಲಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಜರಾತಿ ಸಮಸ್ಯೆ ಉಂಟಾಗುತ್ತಿತ್ತು. ಪ್ರತಿ ದಿನವೂ ಇಲ್ಲಿನ ವಿದ್ಯಾರ್ಥಿಗಳು ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಶೆಟ್ಟಿ, ಕಾಲೇಜಿನ ಬೋಧಕ ಮಂಡಳಿ ಹಾಗೂ ವಿದ್ಯಾರ್ಥಿಗಳು ಇತ್ತೀಚೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಗಮನಕ್ಕೆ ಬಸ್ ಸೌಲಭ್ಯ ಇಲ್ಲದೇ ಉಂಟಾಗುತ್ತಿದ್ದ
ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ – ಬೈಂದೂರಿನಲ್ಲಿ ಶಾಸಕರಿಂದ ಚಾಲನೆ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನಕ್ಕೆ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾ.ಪಂ ನಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಚಾಲನೆ ನೀಡಿದರು. ನರೇಗಾ ಕರಪತ್ರ ಹಾಗೂ QR code ಬಿಡುಗಡೆ ಕಾರ್ಯಕ್ರಮದಲ್ಲಿ ಬೈಂದೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಹಾಗೂ ಶಾಸಕರು ನರೇಗಾ ಮಾಹಿತಿಯುಳ್ಳ ಕರಪತ್ರ ಹಾಗೂ MGNREGA YouTube channel QR code ಬಿಡುಗಡೆಗೊಳಿಸಿ ಉದ್ಯೋಗ ಖಾತರಿ ಯೋಜನೆಯನ್ನು
ವಿಶೇಷಚೇತನರಿಗೆ ತೊಂದರೆ ಕೊಡಬೇಡಿ – ಮಾಜಿ ಆಯುಕ್ತ ಕೆ. ವಿ. ರಾಜಣ್ಣ
ಕುಂದಾಪುರ : ಕಂದಾಯ ಇಲಾಖೆಯಲ್ಲಿ ವಿಶೇಷಚೇತನರ ಪಿಂಚಣಿಗೆ ಸತಾಯಿಸಬೇಡಿ. ಮಧ್ಯವರ್ತಿಗಳಿಗೆ ಅವಕಾಶ ನೀಡಬೇಡಿ ಎಂದು ಅಂಗವಿಕಲ ಹಕ್ಕುಗಳ ಅಧಿನಿಯಮದ ಮಾಜಿ ಆಯುಕ್ತ ಕೆ.ವಿ.ರಾಜಣ್ಣ ತಹಶೀಲ್ದಾರ್‌ಗೆ ಸೂಚಿಸಿದರು. ಅವರು ಇಂದು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮುದಾಯ ಆಧಾರಿತ ವಿಕಲಚೇತನ ಪುನಶ್ಚೇತನ ಕಾರ್ಯಕ್ರಮದ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು. ಬೆಂಗಳೂರು ಗ್ರಾಮಾಂತರ, ಉಡುಪಿಯಲ್ಲಿ ಮಾತ್ರ ಡಿಡಿಆರ್‌ಸಿ ಕಾರ್ಯನಿರ್ವಹಿಸುತ್ತಿದೆ. 34ರ ಪೈಕಿ 14 ಕಡೆ ಮಾತ್ರ ಅಸ್ತಿತ್ವದಲ್ಲಿದೆ. ವಿಕಲಚೇತನರಿಗೆ ಮೀಸಲಾದ ಶೇ.5 ನಿಧಿಯನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಂಡು ಸೌಲಭ್ಯಗಳನ್ನು ನೀಡಬೇಕು ಎಂದರು.
ಬಿಜೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರಕ್ಕೆ ಚಾಲನೆ
ಕುಂದಾಪುರ: “ಸಮೃದ ಬೈಂದೂರು”ಯೋಜನೆಯ ಮೊದಲ ಕಾರ್ಯಕ್ರಮ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ವತಿಯಿಂದ ಬೈಂದೂರು ತಾಲೂಕಿನ ಬಿಜೂರು ಸರ್ಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯ, ಒಳಗೊಂಡ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಶಾಸಕ ಗುರುರಾಜ್ ಗಂಟೆಹೊಳೆ ಉದ್ಘಾಟಿಸಿ, ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಹಾಗೂ ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ನಂತರ ಮಾತನಾಡಿದ ಶಾಸಕರು ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಣಾ ಕಾರ್ಯಕ್ರಮ
ಉಡುಪಿ ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಬೈಂದೂರು ತಾಲೂಕಿನ ಕ್ರೀಡಾಪಟುಗಳಿಗೆ ಸರಕಾರಿ ಪ್ರೌಢಶಾಲೆ ಕಿರಿಮಂಜೇಶ್ವರದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಸಮವಸ್ತ್ರವನ್ನು ವಿತರಿಸಿ ಮಾತನಾಡಿ ಬೆಳೆಯುವ ಸಿರಿ ಮೊಳಕೆಯಲ್ಲಿ ಪ್ರಾಥಮಿಕವಾಗಿ ಮಕ್ಕಳಿಗೆ ಶಿಕ್ಷಣ ಜೊತೆಯಲ್ಲಿ ಕ್ರೀಡೆಯನ್ನು ತೊಡಗಿಸಿಕೊಂಡರೆ ಮುಂದೊಂದು ದಿನ ಹೆಮ್ಮರವಾಗಿ ಬೆಳೆಯುವುದು ಸಾಧ್ಯ ಇದಕ್ಕೆ ಸಹಕರಿಸಿದ ಶಿಕ್ಷಕರಿಗೆ ಅಭಿನಂದಿಸಿದರು. ತಾಲೂಕು ಕ್ರೀಡಾಧಿಕಾರಿಯಾಗಿ ಚಂದ್ರಶೇಖರ್ ಶೆಟ್ಟಿ ಅವರು ಮಾತನಾಡಿ ಕೆನರಾ ಬ್ಯಾಂಕ್ ವತಿಯಿಂದ ಮಕ್ಕಳಿಗೆ ಸಮಸ್ತ್ರವನ್ನು ನೀಡಲಾಗಿದೆ ಉಡುಪಿ ಜಿಲ್ಲಾ ಮಟ್ಟ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಶ್ರೀ
ಸಮೃದ್ಧ ಬೈಂದೂರು ಪರಿಕಲ್ಪನೆ ಅನಾವರಣ
ಕುಂದಾಪುರ: ಡಾ. ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರಿಗೆ ಅಭಿನಂದನೆ, ಸರಕಾರಿ ಶಾಲೆಗಳ ಉಳಿವು ಮತ್ತು ಅಭಿವೃದ್ಧಿಗಾಗಿ ವಿಶಿಷ್ಟ ಯೋಜನೆಯ 300 ಟ್ರೀಸ್ ಉದ್ಘಾಟನಾ ಸಮಾರಂಭ ಹಾಗೂ ಸಮೃದ್ಧ ಬೈಂದೂರು ಪರಿಕಲ್ಪನೆ ಅನಾವರಣ ಕಾರ್ಯಕ್ರಮ ತ್ರಾಸಿ ಕೊಂಕಣ ಖಾರ್ವಿ ಸಂಭಾಗಣದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದಶಕಗಳ ಬೈಂದೂರು ಕ್ಷೇತ್ರದ ಸಂಪರ್ಕದ ಆಧಾರದಲ್ಲಿ ಸಮೃದ್ಧ ಬೈಂದೂರು ನಿರ್ಮಾಣಕ್ಕೆ ಹೆಜ್ಜೆ ಇಟ್ಟಿರುವುದು ಒಂದು ರೀತಿಯ ಸಾಮಾಜಿಕ
ಕರಾಟೆ ಚಾಂಪಿಯನ್ ಶಿಪ್ : ಶಿಖಾ ಬಿಜೂರು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಉಪ್ಪುಂದ : ಹುಬ್ಬಳ್ಳಿಯಲ್ಲಿ ಜರುಗಿದ 14ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ವಿಜೇತಳಾದ ಬ್ರಹ್ಮಾವರ ಲಿಟಲ್‌ರಾಕ್ ಇಂಡಿಯನ್ ಸ್ಕೂಲ್‌ನ 6ನೇ ತರಗತಿ ವಿದ್ಯಾರ್ಥಿನಿ ಶಿಖಾ ಬಿಜೂರು ರಾಷ್ಟ್ರ ಮಟ್ಟದ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಕುಂದಾಪುರದ ಇವೊಲ್ಯೂಷನ್ ಅಕಾಡೆಮಿ ಆಫ್ ಮೆಟೀರಿಯಲ್ ಆರ್ಟ್ಸ್ & ಫಿಟ್‌ನೆಸ್ ಸಂಸ್ಥೆಯಲ್ಲಿ ಗುರು ಗ್ರಷಮೇಶ್ ಕುಂದರ್ ಅವರಲ್ಲಿ ತರಬೇತಿ ಪಡೆಯುತ್ತಿರುವ ಶಿಖಾ ಬಿಜೂರು, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಯೋಜಿಸಿದ ರಾಜ್ಯ ಮಟ್ಟದ ಸ್ವರ್ಧೆಯಲ್ಲಿ 10 ವರ್ಷದೊಳಗಿನ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಪ್ರಥಮ
ಶಾಸಕರಿಂದ ರಾಜ್ಯ ಮಟ್ಟದ ರಿಹ್ಯಾಬ್ ಮೇಳದ ಗಾಲಿ ಕುರ್ಚಿ ರ‍್ಯಾಲಿ ಕಾರ್ಯಕ್ರಮಕ್ಕೆ ಚಾಲನೆ
ಸೇವಾ ಭಾರತಿ (ರಿ) ಕನ್ಯಾಡಿ ಇದರ ಆಶ್ರಯದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ಮಂಗಳೂರಲ್ಲಿ ನಡೆದ ರಾಜ್ಯ ಮಟ್ಟದ ರಿಹ್ಯಾಬ್ ಮೇಳದ ಗಾಲಿ ಕುರ್ಚಿ ರ‍್ಯಾಲಿ ಕಾರ್ಯಕ್ರಮಕ್ಕೆ ಬೈಂದೂರಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆಯವರು ಚಾಲನೆ ನೀಡಿದರು.
17ನೇ ಕ್ಲೀನ್ ಕಿನಾರ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರುರಾಜ ಗಂಟಿಹೊಳೆ
17ನೇ ಕ್ಲೀನ್ ಕಿನಾರ ಸ್ವಚ್ಛತಾ ಕಾರ್ಯಕ್ರಮವು ಸನ್ಯಾಸಿ ಬಲೆ ಗುಜ್ಜಾಡಿಯಲ್ಲಿ ಕೇಸರಿ ದಳದ ವತಿಯಿಂದ ನಡೆಯಿತು. ಮಾನ್ಯ ಶಾಸಕರಾದ ಗುರುರಾಜ ಗಂಟಿಹೊಳೆಯವರು ಭಾಗವಹಿಸಿದರು. ಇಂದಿನ ಕಾರ್ಯಕ್ರಮದಲ್ಲಿ ಜಾಗೃತ ಗೆಳೆಯರ ಬಳಗ, ಪಾಂಚಜನ್ಯ ಕ್ರೀಡಾ ಸಂಘ, ಶ್ರೀನಿಧಿ ಭಜನಾ ಮಂಡಳಿಯ ಸದಸ್ಯರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಅಭಿಯಾನಕ್ಕೆ ಸಹಕರಿಸಿದರು.
ಕೇಂದ್ರ ಸಚಿವರಾದ ಶ್ರೀ ಭುಪೇಂದ್ರ ಯಾದವ್ ಅವರನ್ನು ಭೇಟಿಯಾದ ಶಾಸಕ ಗುರುರಾಜ್ ಗಂಟಿಹೊಳೆ
ಸಮೃದ್ಧ ಬೈಂದೂರು ಈ ಕಲ್ಪನೆಯನ್ನು ಸಾಕಾರಗೊಳಿಸಲೆಂದು ನಮ್ಮ ನೆಚ್ಚಿನ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಅವರು ಇಂದು ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ಮತ್ತು ಕೇಂದ್ರ ಪ್ರಾಕೃತಿಕ ಸಚಿವರಾದ ಶ್ರೀ ಭುಪೇಂದ್ರ ಯಾದವ್ ಅವರನ್ನು ನಮ್ಮ ಹೆಮ್ಮೆಯ ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಮತ್ತು ಮಾಜಿ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ ಅವರೊಂದಿಗೆ ಶ್ರೀ ಭುಪೇಂದ್ರ ಯಾದವ್ ಅವರ ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿ, ವಿವಿಧ ಯೋಜನೆಗಳು ಮತ್ತು ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಿದರು.