News & Events
ನಾವುಂದ ಗ್ರಾಮದ ಕಂತಿಹೊಂಡ ಸೇವಾಬಸ್ತಿಯ ಬಂಧುಗಳ ಮನೆಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಬೇಟಿ
ನೆಚ್ಚಿನ ಪ್ರಧಾನಮಂತ್ರಿಗಳಾದ ಶ್ರೀನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಬೈಂದೂರಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರು ನಾವುಂದ ಗ್ರಾಮದ ಕಂತಿಹೊಂಡ ಸೇವಾಬಸ್ತಿಯ ಬಂಧುಗಳ ಮನೆಗೆ ಬೇಟಿ ನೀಡಿ ಅವರ ಕುಟುಂಬದ ಜೊತೆ ಭೋಜನ ಸ್ವೀಕರಿಸಿ, ಕುಶಲೋಪರಿ ವಿಚಾರಿಸಿದರು.
ಮೋದಿಯವರ ಜನ್ಮಾಚರಣೆಯ ನಿಮಿತ್ತ ತ್ರಾಸಿ ಜಂಕ್ಷನ್ ಅಲ್ಲಿ ಚಾ ಪೇ ಚರ್ಚಾ ಕಾರ್ಯಕ್ರಮ
ಪ್ರಧಾನಿ ನರೇಂದ್ರ ಮೋದಿಯವರ ಜನ್ಮಾಚರಣೆಯನ್ನು ಚಾ ಪೇ ಚರ್ಚಾ ಕಾರ್ಯಕ್ರಮದ ಮೂಲಕ ತ್ರಾಸಿ ಜಂಕ್ಷನ್ ಅಲ್ಲಿ ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉಪಸ್ಥಿತಿಯಲ್ಲಿ ನೆಡೆಯಿತು.
ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಬ್ರಹತ್ ರಕ್ತದಾನ ಶಿಬಿರ
ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ 73 ನ್ ಜನ್ಮ ದಿನದ ಪ್ರಯುಕ್ತ ದೇಶದಾದ್ಯಂತ ನಡೆಯುತ್ತಿರುವ ಸೇವಾ ಪಾಕ್ಷಿಕ ದ ಅಂಗವಾಗಿ ಬ್ರಹತ್ ರಕ್ತದಾನ ಶಿಬಿರ ಬೈಂದೂರಿನ ಅಂಬಿಕಾ ಇಂಟರ್ನ್ಯಾಷನಲ್ ಹೋಟೆಲ್ ನ ಶಾರದಾ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ,ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ,ಯುವ ಮೋರ್ಚಾ
ಮೀನುಗಾರಿಕಾ ಇಲಾಖೆಯ ಅಧಿಕಾರಿಯೊಂದಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಸಭೆ
ಮೀನುಗಾರಿಕಾ ಇಲಾಖೆಯ ಅಧಿಕಾರಿಯೊಂದಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಸಭೆ ನಡೆಸಿದರು. ಮೀನುಗಾರರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು, ಹಾಗೆಯೇ ಅವರಿಗೆ ಅನುಕೂಲವಾಗುವ ಹೊಸ ಯೋಜನೆಗಳ ಕುರಿತು ಚರ್ಚಿಸಿ, ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಮೀನುಗಾರಿಕಾ ಇಲಾಖೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿ ತಿಳಿಸಿದರು.
ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಶಾಸಕರಾದ ಗುರುರಾಜ್ ಗಂಟಿಹೊಳೆ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಶಾಸಕರು.
ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಗುರುರಾಜ್ ಗಂಟಿಹೊಳೆ
ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವೈದ್ಯಾಧಿಕಾರಿಯವರ ನಿರ್ಲಕ್ಷ್ಯದ ಬಗ್ಗೆ ಗರಂ ಆದರು. ಇಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಎಲ್ಲ ಸೌಲಭ್ಯಗಳನ್ನು ಹೊಂದಿದ್ದರು ಸಹ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ತರಾಟೆಗೆ ತೆಗೆದುಕೊಂಡರು. ಕರ್ತವ್ಯ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಮತ್ತೆ ಇದೇ ರೀತಿಯಾದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.